Breaking
22 Mar 2026, Sun

ಪಾಣೆಮಂಗಳೂರಿನಲ್ಲಿ ಹಂಚಿನ ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ: ಬೆಲೆಬಾಳುವ ವಸ್ತುಗಳು ಹಾನಿ

ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ಬಂಗ್ಲಗುಡ್ಡೆಯ ಹಂಚಿನ ಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ಡಿ. 22 ರಂದು ರಾತ್ರಿ ನಡೆದಿದೆ.

ರಾತ್ರಿ ಸುಮಾರು 10 ಗಂಟೆ ವೇಳೆಗೆ ಮನೆಯ ಹಂಚಿನ ಮೇಲೆ ಬೆಂಕಿಯ ಜ್ವಾಲೆ ಕಾಣಿಸಿಕೊಂಡಿದ್ದು ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.

ಘಟನೆಯಲ್ಲಿ ಮನೆಯ ಹಂಚು , ಪಕ್ಕಾಸು ಸಹಿತ ಮನೆಯೊಳಗಿನ ಕೆಲವು ಬೆಲೆಬಾಳುವ ವಸ್ತುಗಳು ಬೆಂಕಿಗೆ ಭಸ್ಮವಾಗಿದೆ. ಅದೃಷ್ಟವಶಾತ್ ಮನೆಯವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಧಾವಿಸಿದ ಪಾಣೆಮಂಗಳೂರು ಗ್ರಾಮ ಆಡಳಿತ ಅಧಿಕಾರಿ ಯಶ್ವಿತಾ, ಗ್ರಾಮ ಸಹಾಯಕಿ ಯಶೋಧ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *