Breaking
19 Sep 2026, Sat

ಕುಡಿದ ಮತ್ತಿನಲ್ಲಿ ಲಾರಿ ಚಾಲನೆ: ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಹಿರಿಯಡ್ಕ: ಕುಡಿದ ಮತ್ತಿನಲ್ಲಿ ಲಾರಿ ಚಾಲಕನೊಬ್ಬ ಲಾರಿ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಮಧ್ಯೆದಲ್ಲೇ ಪಲ್ಟಿಯಾದ ಘಟನೆ ಹಿರಿಯಡ್ಕ ಗುಡ್ಡೆಅಂಗಡಿ ಸಮೀಪ ನಡೆದಿದೆ.

ಹಿರಿಯಡ್ಕದಿಂದ ಕಾರ್ಕಳ ಕಡೆಗೆ ಅತೀ ವೇಗವಾಗಿ ಹಾಗೂ ಅಡ್ಡಾದಿಡ್ಡಿಯಾಗಿ ಲಾರಿಯನ್ನು ಚಲಾಯಿಸಿಕೊಂಡು ಹೋಗುತ್ತಿದ್ದನೆಂದು ತಿಳಿದುಬಂದಿದೆ.

ಘಟನೆ ನಡೆದ ಸಂದರ್ಭದಲ್ಲಿ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸದ ಕಾರಣ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *