Breaking
19 Sep 2026, Sat

ಬಾಂಗ್ಲಾದೇಶದ ಪ್ರಜೆಗೆ ಪಾಸ್ ಪೋರ್ಟ್ ಮಾಡಿಕೊಡಲು ಸಹಾಯ: ವಿಟ್ಲ ಪೊಲೀಸ್‌ ಠಾಣೆಯ ಸಿಬ್ಬಂದಿ ಬಂಧನ

ವಿಟ್ಲ: ಪಾಸ್ ಪೋರ್ಟ್ ಮಾಡಿಕೊಡಲು ಬಾಂಗ್ಲಾದೇಶದ ಪ್ರಜೆಗೆ ಸಹಾಯ ಮಾಡಿದ ಆರೋಪದಡಿ ವಿಟ್ಲ ಪೊಲೀಸ್‌ ಠಾಣೆಯ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದು ಕಾನ್ಸ್ಟೇಬಲ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಧಿತನನ್ನು ವಿಟ್ಲ ಪೊಲೀಸ್‌ ಠಾಣೆಯ ಕಾನ್ಸ್ಟೇಬಲ್ ಪ್ರದೀಪ್ ಎಂದು ಗುರುತಿಸಲಾಗಿದೆ.

ಶಂಕಿತ ಬಾಂಗ್ಲಾ ಪ್ರಜೆ ಶಕ್ತಿದಾಸ್ ಎಂಬಾತನಿಗೆ ಪಾಸ್ ಪೋರ್ಟ್ ಪಡೆಯಲು ಸಹಾಯ ಮಾಡಿದ ದೂರಿನ ಆಧಾರದ ಮೇಲೆ ಕಾನ್ಸ್ಟೇಬಲ್ ಪ್ರದೀಪ್ ನನ್ನು ಬಂಧಿಸಲಾಗಿದೆ.

ಈ ಹಿಂದೆ ಶಕ್ತಿದಾಸ್ ನೀಡಿದ್ದ ಪಾಸ್ ಪೋರ್ಟ್ ಅರ್ಜಿಯನ್ನು ಸಾಬೀ ಮಿರ್ಜಿ ತಿರಸ್ಕರಿಸಿದ್ದರು. ಆದರೆ ಇತ್ತೀಚೆಗೆ ಸಾಬೀ ಮಿರ್ಜಿ ಕರ್ತವ್ಯ ನಿಮಿತ್ತ ಬೇರೆ ಕಡೆಗೆ ತೆರಳಿದ್ದ ಸಂದರ್ಭದಲ್ಲಿ ಕಾನ್ಸ್ಟೇಬಲ್ ಪ್ರದೀಪ್ ಸಹಾಯ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Leave a Reply

Your email address will not be published. Required fields are marked *