Breaking
23 Mar 2026, Mon

ಜ.15 ಪಿಲಿಗೂಡು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ಎಳನೀರು ಅಭಿಷೇಕ, ನವಕ ಕಲಶಾಭಿಷೇಕ, ಲಲಿತಾ ಸಹಸ್ರನಾಮ ಹೋಮ

ಬೆಳ್ತಂಗಡಿ: ಪಿಲಿಗೂಡು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಜ. 15ರಂದು 101ಎಳನೀರು ಅಭಿಷೇಕ, ನವಕ ಕಲಶಾಭಿಷೇಕ, ಲಲಿತಾ ಸಹಸ್ರನಾಮ ಹೋಮ ನಡೆಯಲಿದೆ.

ವೇದಮೂರ್ತಿ ಕೆ.ಯಂ. ಸುಬ್ರಹ್ಮಣ್ಯ ಮುಚ್ಚಿನ್ನಾಯ ಕಣಿಯೂರು ಇವರ ವೈಧಿಕ ನೇತೃತ್ವದಲ್ಲಿ ಬೆಳಿಗ್ಗೆ 9.00ರಿಂದ ಪೂಜಾ ವಿಧಿವಿಧಾನಗಳು ಆರಂಭಗೊಳ್ಳಲಿದ್ದು, ಪೂರ್ವಾಹ್ನ ಗಂಟೆ 10.30ರಿಂದ 11.30ರವರೆಗೆ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ, ಪಿಲಿಗೂಡು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ ಗಂಟೆ 12.00ಕ್ಕೆ ಪೂರ್ಣಾಹುತಿ, 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದ್ದು ರಾತ್ರಿ ಗಂಟೆ 7.00ರಿಂದ ಶ್ರೀ ಭಗವತಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಸಸಿಹಿತ್ಲು ಮಂಗಳೂರು ‘ಕಂಚಿಲ್ದ ಪರಕೆ’ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ.

ಭಗವದ್ಭಕ್ತರು ಈ ಎಲ್ಲಾ ಕಾರ್ಯಕ್ರಮಕ್ಕೆ ಆಗಮಿಸಿ, ಶ್ರೀ ದೇವರ ತೀರ್ಥ- ಪ್ರಸಾದವನ್ನು ಸ್ವೀಕರಿಸಿ, ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಪದ್ಮನಾಭ ಹಾಗೂ ಸಹೋದರರು, ಮಕ್ಕಳು ಪಿಲಿಗೂಡು ಹಾಗೂ ಚಾಮುಂಡೇಶ್ವರಿ ಮಿತ್ರಮಂಡಳಿ, ಚಾಮುಂಡೇಶ್ವರಿ ಭಜನಾ ಮಂಡಳಿ ಮನವಿ ಮಾಡಿದೆ.

Leave a Reply

Your email address will not be published. Required fields are marked *