Breaking
23 Mar 2026, Mon

ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ

ಮೂಡುಬಿದಿರೆ: ಪ್ರೆಸ್ ಕ್ಲಬ್ಬಿನಿಂದ ಪ್ರತ್ಯೇಕಗೊಂಡಿರುವ ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಡಿ. 24 ರಂದು ಮೂಡುಬಿದಿರೆ ಪ್ರೆಸ್ ಕ್ಲಬ್‌ ಕಾರ್ಯಾಲಯದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜೈಸನ್ ತಾಕೋಡೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗಣೇಶ್ ಕಾಮತ್ ಎಂ, ಕಾರ್ಯದರ್ಶಿಯಾಗಿ ಶರತ್ ದೇವಾಡಿಗ, ಕೋಶಾಧಿಕಾರಿಯಾಗಿ ರಾಘವೇಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮೂಡುಬಿದಿರೆ ಪ್ರೆಸ್ ಕ್ಲಬ್ ಅಧ್ಯಕ್ಷ ಬೆಳುವಾಯಿ ಸೀತಾರಾಮ ಆಚಾರ್ಯ, ಪ್ರಸನ್ನ ಹೆಗ್ಡೆ, ಅಶ್ರಫ್ ವಾಲ್ಪಾಡಿ, ಪ್ರೇಮಶ್ರೀ ಕಲ್ಲಬೆಟ್ಟು ಹಾಗೂ ಪುನೀತ್ ಅವರು ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಹರೀಶ್ ಕೆ ಅದೂರು, ಪ್ರೆಸ್ ಕ್ಲಬ್ ಸದಸ್ಯರಾದ ಧನಂಜಯ ಮೂಡುಬಿದಿರೆ ಯಶೋಧರ ಬಂಗೇರ ಅವರು ಸಹಕರಿಸಿದರು.


ಚುನಾವಣಾ ಅಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿನಿಧಿ ರಾಜೇಶ್ ಶೆಟ್ಟಿ ಹಾಗೂ ಸಹಾಯಕ ಚುನಾವಣಾ ಅಧಿಕಾರಿಯಾಗಿ ಕಿರಣ್ ಸಿರ್ಸಿಕರ್ ಅವರು ಆಗಮಿಸಿ ಸಂಪೂರ್ಣ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Leave a Reply

Your email address will not be published. Required fields are marked *