Breaking
26 Jun 2026, Fri

ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ: ಆರೋಪಿಯ ಬಂಧನ

ಬಂಟ್ವಾಳ: ಕಳ್ಳಿಗೆ ಗ್ರಾಮದ ನೆತ್ರಕೆರೆ ಹೊಟೇಲ್ ನಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನೆತ್ರಕೆರೆ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ.

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಹೋಟೆಲ್ ನಲ್ಲಿ ರೂ. 4 ಸಾವಿರ ಮೌಲ್ಯದ ರೂ.50 ಮುಖಬೆಲೆಯ 90 ml ನ 80 ಸ್ಯಾಚೆಟ್ ಗಳು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಕುರಿತು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *