ಬೆಳ್ತಂಗಡಿ: ಶಾಸಕ ಶ್ರೀ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ “ಜನರ ಬಳಿಗೆ ತಾಲೂಕು ಆಡಳಿತ” ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮವು ಡಿ . 26 ರಂದು ರಂದು ನಡೆಯಲಿದೆ.

ಈ ಕಾರ್ಯಕ್ರಮವು ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಲಿದ್ದು ಬೆಳಿಗ್ಗೆ 9.30 ಗಂಟೆಗೆ ಗ್ರಾಮ ಪಂಚಾಯತ್ ಸಭಾಭವನ ಲಾಯಿಲ, 11.00 ಗಂಟೆಗೆ ನಾವೂರು , ಮಧ್ಯಾಹ್ನ 2.00 ಗಂಟೆಗೆ ಮಲವಂತಿಗೆ, ಸಂಜೆ 4.00 ಗಂಟೆಗೆ ಕಡಿರುದ್ಯಾವರ ಜನಸ್ಪಂದನಾ ಕಾರ್ಯಕ್ರಮವು ನಡೆಯಲಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಬಂಧುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಇಲಾಖಾ ಸೇವಾ ಸಲಹೆ ಹಾಗೂ ಸಂಬಂಧಪಟ್ಟ ಗ್ರಾಮಸ್ಥರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .



