ಸುಳ್ಯ : ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಹಿಳೆಯೊಬ್ಬರನ್ನು ಆಟೋ ಚಾಲಕ ಗುರುಪ್ರಕಾಶ್ ಎಂಬವರು ರಕ್ಷಿಸಿದ ಘಟನೆ ಸಂಪಾಜೆ ಗ್ರಾಮದ ಕಲ್ಲುಗುಂಡಿ ಕೈಪಡ್ಕ ಎಂಬಲ್ಲಿ ನಡೆದಿದೆ.

ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದು, ಈ ವೇಳೆ ಅದೇ ರಸ್ತೆಯಲ್ಲಿ ಆಟೋ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಗುರುಪ್ರಕಾಶ್ ಅವರಿಗೆ ವಿಷಯ ತಿಳಿದು ತಕ್ಷಣ ಕಾರ್ಯಪ್ರವೃತ್ತರಾದ ಅವರು ಬಾವಿಗೆ ಜಿಗಿದು, ಸ್ಥಳೀಯರ ಸಹಾಯದೊಂದಿಗೆ ಮಹಿಳೆಯನ್ನು ಸುರಕ್ಷಿತವಾಗಿ ಮೇಲೆತ್ತಿದ್ದಾರೆ.
ಬಳಿಕ ಮಹಿಳೆಯನ್ನು ಚಿಕಿತ್ಸೆಗಾಗಿ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ.





