ಉಪ್ಪಿನಂಗಡಿ: ಕೆ ಎಸ್ ಆರ್ ಟಿ ಸಿ ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದ ಸಂದರ್ಭದಲ್ಲಿ ಪ್ರಯಾಣಿಕರೊಬ್ಬರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ ಘಟನೆ ಡಿ.25 ರಂದು ನಡೆದಿದೆ.
ಬಸ್ ಸುಬ್ರಹ್ಮಣ್ಯದಿಂದ ಕಾರವಾರಕ್ಕೆ ತೆರಳುತಿದ್ದ ವೇಳೆ ಪೆರ್ನೆ ಗ್ರಾಮದ ಕರ್ವೇಲು ಸಮೀಪಿಸುತ್ತಿದ್ದಾಗ ಬಸ್ ಚಾಲಕ ಗೋವಿಂದ ನಾಯ್ಕ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಬಸ್ ಚಾಲನೆಯಲ್ಲಿ ವ್ಯತ್ಯಾಸವನ್ನು ಗಮನಿಸಿದ ಪ್ರಯಾಣಿಕರಾದ ನ್ಯಾಯವಾದಿ ನೆಲ್ಯಾಡಿಯ ಇಸ್ಮಾಯೀಲ್ ಎಂಬವರ ಪುತ್ರ ಸಲ್ಮಾನುಲ್ ಫಾರಿಸ್ ತಕ್ಷಣವೇ ಚಾಲಕನತ್ತ ಬಂದು ಚಲಿಸುತ್ತಿದ್ದ ಬಸ್ ಅನ್ನು ನಿಧಾನವಾಗಿ ಹತೋಟಿಗೆ ತಂದು ರಸ್ತೆ ಬದಿ ಸುರಕ್ಷಿತವಾಗಿ ನಿಲ್ಲಿಸಿದ್ದಾರೆ.

ಬಳಿಕ ಚಾಲಕನನ್ನು ತಕ್ಷಣವೇ ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಸಲ್ಮಾನುಲ್ ಫಾರಿಸ್ ಅವರ ಸಮಯ ಪ್ರಜ್ಞೆಯಿಂದ ಭಾರೀ ಅಪಾಯವೊಂದು ತಪ್ಪಿದಂತಾಗಿದೆ.




