Breaking
19 Sep 2026, Sat

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಪ್ರಯಾಣಿಕನ ರಕ್ಷಣೆ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಉಡುಪಿ: ಚಲಿಸುತಿದ್ದ ರೈಲಿನಿಂದ ವ್ಯಕ್ತಿಯೋರ್ವ ಇಳಿಯಲು ಪ್ರಯತ್ನಿಸಿದ ವೇಳೆ ಆಕಸ್ಮಿಕವಾಗಿ ಬಿದ್ದು ರೈಲ್ವೆ ಪೊಲೀಸ್ ಸಿಬ್ಬಂದಿ ರಕ್ಷಿಸಿದ ಘಟನೆ ಡಿ.25 ರಂದು ರಾತ್ರಿ ಕೊಂಕಣ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ತಿರುವನಂತಪುರದಿಂದ ಹೊಸದಿಲ್ಲಿಗೆ ತೆರಳುತಿದ್ದ ಅಮೃತಸರ ಎಕ್ಸ್‌ಪ್ರೆಸ್ ರೈಲು ಉಡುಪಿ ರೈಲ್ವೇ ನಿಲ್ದಾಣಕ್ಕೆ ಪ್ರವೇಶಿಸುತ್ತಿದ್ದ ಸಂದರ್ಭದಲ್ಲಿ ಪ್ರಯಾಣಿಕನೊಬ್ಬ ರೈಲಿನಿಂದ ಇಳಿಯಲು ಯತ್ನಿಸಿ ಮುಗ್ಗರಿಸಿ ಬಿದ್ದಿದ್ದಾನೆ. ಇದನ್ನು ಗಮನಿಸಿದ ರೈಲ್ವೆ ಪೊಲೀಸ್ ಸಿಬ್ಬಂದಿ ತಕ್ಷಣ ಧಾವಿಸಿ ಆತನನ್ನು ಹಳಿಗೆ ಬೀಳದಂತೆ ತಡೆದು ರಕ್ಷಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದ ವೀಡಿಯೋ ರೈಲ್ವೇ ನಿಲ್ದಾಣದ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *