Breaking
21 Jun 2026, Sun

ಸ್ಕೂಟರ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ: ಯುವಕ ಸಾವು

ಉಡುಪಿ: ಸ್ಕೂಟರ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ಡಿ. 26 ರಂದು ಮುದ್ರಂಗಡಿಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕುತ್ಯಾರು ಕೆಂಜ ಹಿಟ್ಟು ನಿವಾಸಿ ಜೋಸ್ವಿನ್ ಡಿಸೋಜಾ (22) ಎಂದು ಗುರುತಿಸಲಾಗಿದೆ.

ಡಿ. 26 ರಂದು ಜೋಸ್ಟಿನ್ ಮುದ್ರಂಗಡಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕುತ್ಯಾರುದಲ್ಲಿರುವ ತಮ್ಮ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಮಣಿಪಾಲದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ರಸ್ತೆ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *