Breaking
22 Mar 2026, Sun

ಬಂಟ್ವಾಳ : ನಾಪತ್ತೆಯಾದ ವ್ಯಕ್ತಿ ಶವವಾಗಿ ಪತ್ತೆ

ಬಂಟ್ವಾಳ : ನಾಪತ್ತೆಯಾಗಿದ್ದ ವೃದ್ಧರೊಬ್ಬರ ಶವ ಬಾವಿಯಲ್ಲಿ ಪತ್ತೆಯಾದ ಘಟನೆ ವಿಟ್ಲದಲ್ಲಿ ಡಿ.25 ರಂದು ನಡೆದಿದೆ.

ಮೃತಪಟ್ಟವರು ಕೊಳ್ನಾಡು ಗ್ರಾಮದ ಕಲ್ಲಮಜಲು ನಿವಾಸಿ ಪೂವಪ್ಪ ಪೂಜಾರಿ (65) ಎಂದು ಗುರುತಿಸಲಾಗಿದೆ.

ಪೂವಪ್ಪ ಅವರು ಡಿ.15 ರಂದು ಮನೆಯಿಂದ ಹೊರಟು ಬೇಗ ಮನೆಗೆ ಹಿಂತಿರುಗುವುದಾಗಿ ಹೇಳಿ ತೆರಳಿದ್ದರು. ಆದರೆ ಹಿಂತಿರುಗಿ ಬಾರದೇ ಇದ್ದ ಹಿನ್ನಲೆಯಲ್ಲಿ ಅವರ ಪತ್ನಿ ವಿಟ್ಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು .

ಬಳಿಕ ಕುಟುಂಬ ಸದಸ್ಯರು, ಸಂಬಂಧಿಕರು ಮತ್ತು ಸ್ನೇಹಿತರು ಅವರನ್ನು ಪತ್ತೆಹಚ್ಚಲು ಪ್ರಯತ್ನಿಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ .

ಡಿ. 25 ರಂದು ಕೊಳ್ನಾಡು ಗ್ರಾಮದ ಕಲ್ಲಮಜಲು ಎಂಬಲ್ಲಿ ನಿರ್ಜನ ಮನೆಗೆ ಸೇರಿದ 60 ಅಡಿ ಆಳದ ಬಾವಿಯಲ್ಲಿ ಅವರ ಶವ ಪತ್ತೆಯಾಗಿದೆ.

ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *