Breaking
19 Sep 2026, Sat

ಕರಿಮಣಿ ಸರ ಕಸಿದುಕೊಂಡ ಆರೋಪಿಯ ಬಂಧನ

ಮಂಗಳೂರು: ಕೊಂಚಾಡಿ ಕೊಪ್ಪಳಕಾಡು ಎಂಬಲ್ಲಿ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಡಿ. 28 ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ಮೂಲದ ರೋಹಿತ್‌ (25) ಎಂದು ಗುರುತಿಸಲಾಗಿದೆ.

ಡಿ. 25ರಂದು ಸಂಜೆ ಕೊಂಚಾಡಿ ಗುರುನಗರದ ರತ್ನಾವತಿ ಅವರ ಕುತ್ತಿಗೆಯಿಂದ 32 ಗ್ರಾಂ ತೂಕದ ಕರಿಮಣಿ ಸರ ಕಸಿದು ಪರಾರಿಯಾಗಿದ್ದನು. ಇದೀಗ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನಿಂದ ಕಳವು ಮಾಡಲಾದ ಸರ ಮತ್ತು ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *