ಕನ್ಯಾನ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಕೇಪು ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪರಮಪೂಜ್ಯ ರಾಜರ್ಷಿ ಪದ್ಮಭೂಷಣ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮವು ಕನ್ಯಾನ ಗ್ರಾಮದ ಬನಾರಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ಡಿ. 28 ರಂದು ನಡೆಯಿತು.

ಬೆಳಿಗ್ಗೆ 7.00 ಗಂಟೆಗೆ ವೇದಮೂರ್ತಿ ಚಂದ್ರಶೇಖರ ಭಟ್ಟ ಕುರೂಮೂಲೆ ಇವರ ಪೌರೋಹಿತ್ಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆದು, 9.30 ಕ್ಕೆ ಮಹಾಪೂಜೆ, 10.30 ಕ್ಕೆ ಧಾರ್ಮಿಕ ಸಭೆ ನಡೆಯಿತು.
ಈ ಧಾರ್ಮಿಕ ಸಭೆಯಲ್ಲಿ ಗುರುದೇವದತ್ತ ಸಂಸ್ಥಾನಮ್ ಒಡಿಯೂರು ಕ್ಷೇತ್ರದ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮಿಜಿ, ಕನ್ಯಾನದ ದತ್ತ ಫೈನಾನ್ಸ್ ನ ಶ್ರೀಧರ ಶೆಟ್ಟಿ ಮೇಗಿನಗುತ್ತು ಗುಬ್ಯ, ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಬಿ.ಸಿ ಟ್ರಸ್ಟ್(ರಿ.) ದಕ್ಷಿಣ ಕನ್ನಡ 2 ಮಾನ್ಯ ಜಿಲ್ಲಾ ನಿರ್ದೇಶಕರು ಬಾಬು ನಾಯ್ಕ, ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಬಿ.ಸಿ ಟ್ರಸ್ಟ್(ರಿ.) ವಿಟ್ಲ ತಾಲೂಕಿನ ಯೋಜನಾಧಿಕಾರಿ ಸುರೇಶ್ ಗೌಡ, ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷರು ರೇಖಾ ರಮೇಶ್, ಬನಾರಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಧ್ಯಕ್ಷರು ಲಿಂಗಪ್ಪ ಗೌಡ ಪನೆಯಡ್ಕ, ಕನ್ಯಾನ ಶ್ರೀ ರಾಘವೇಂದ್ರ ಭಜನಾ ಮಂದಿರದ ಪ್ರದಾನ ಕಾರ್ಯದರ್ಶಿ ರಘುರಾಮ ಶೆಟ್ಟಿ, ಜನಜಾಗೃತಿ ವೇದಿಕೆ ಕೇಪು ವಲಯದ ಅಧ್ಯಕ್ಷರು ರಾಧಕೃಷ್ಣ ಚೆಲ್ಲಡ್ಕ, ವಿಟ್ಲ ಪ್ರಗತಿ ಬಂಧು ಸ್ವ ಸಹಾಯ ಸಂಘ ಕೇಂದ್ರ ಒಕ್ಕೂಟದ ಅಧ್ಯಕ್ಷರು ನವೀನ್ ಚಂದ್ರ, ಪ್ರಗತಿ ಬಂಧು ಸ್ವ ಸಹಾಯ ಸಂಘ ಕೇಂದ್ರ ಒಕ್ಕೂಟ ಕೇಪು ವಲಯದ ವಲಯಾಧ್ಯಕ್ಷರು ಗಣೇಶ್ ಮೈರುಗ ಉಪಸ್ಥಿತರಿದ್ದರು.

ಬೆಳಗ್ಗೆ 10.00 ಗಂಟೆಗೆ ತೀರ್ಥಪ್ರಸಾದ ವಿತರಣೆ, ಮಧ್ಯಾಹ್ನ 1.00 ಗಂಟೆಗೆ ಸಾಮೂಹಿಕ ಅನ್ನಸಂತರ್ಪಣೆ ನಡೆಯಿತು.
ಕನ್ಯಾನ 3 ಒಕ್ಕೂಟದ ಹಿರಿಯ ಸದಸ್ಯರಿಗೆ ಗೌರವಾರ್ಪಣೆ ಕಾರ್ಯಕ್ರಮ ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.





