ಕುಂದಾಪುರ: ವೆಂಕಟರಮಣ ದೇವಸ್ಥಾನದ ರಥಬೀದಿಯಲ್ಲಿರುವ ಕಟ್ಟಡವೊಂದಕ್ಕೆ ಅಗ್ನಿ ದುರಂತ ಸಂಭವಿಸಿ ಹಲವು ಅಂಗಡಿಗಳು ಸುಟ್ಟು ಭಸ್ಮವಾದ ಘಟನೆ ಇಂದು (ಡಿ.29) ನಡೆದಿದೆ.

ಮಾಹಿತಿಯ ಪ್ರಕಾರ ಮುಂಜಾನೆ 3.30 ಗಂಟೆ ಸುಮಾರಿಗೆ ಕಟ್ಟಡದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅದು ಪುಸ್ತಕದಂಗಡಿ ಸೇರಿದಂತೆ ಹಲವಾರು ಅಂಗಡಿಗಳಿಗೆ ವೇಗವಾಗಿ ಹಬ್ಬಿದೆ . ಈ ಘಟನೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಸೊತ್ತುಗಳು ನಾಶವಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.




