Breaking
19 Sep 2026, Sat

ಓದಿನ ಕಡೆ ಗಮನ ಹರಿಸುವಂತೆ ಪೋಷಕರು ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿ: ಹಿರೇಬೆಟ್ಟು ಗ್ರಾಮದ ಬಾಲ್ಕಟ್ಟುವಿನಲ್ಲಿ ಪೋಷಕರು ಓದಿನ ಕಡೆಗೆ ಗಮನ ಹರಿಸುವಂತೆ ಬುದ್ಧಿಮಾತು ಹೇಳಿದ್ದಕ್ಕೆ ವಿದ್ಯಾರ್ಥಿನೋರ್ವಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಬಾಲ್ಕಟ್ಟು ನಿವಾಸಿ ಸಮನ್ವಿ ಎಂದು ಗುರುತಿಸಲಾಗಿದ್ದು, ಇವರು ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಡಿ. 26 ರಂದು ಸಂಜೆ ಸಮನ್ವಿ ಅವರು ಓದಿನ ಬದಲು ಮೊಬೈಲ್ ಫೋನ್ ಬಳಸುತ್ತಿರುವುದನ್ನು ಗಮನಿಸಿದ ತಾಯಿ, ಮುಂಬರುವ ಪರೀಕ್ಷೆಗಳಿಗೆ ಸಿದ್ಧರಾಗುವಂತೆ ಬುದ್ಧಿಮಾತು ಹೇಳಿದ್ದಾರೆ. ಇದರಿಂದ ಮನನೊಂದ ಸಮನ್ವಿ, ತಮ್ಮ ಮನೆಯ ಬೆಡ್ ರೂಂನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದನ್ನು ತಕ್ಷಣವೇ ಗಮನಿಸಿದ ಕುಟುಂಬಸ್ಥರು ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *