Breaking
22 Mar 2026, Sun

ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ಬೆಳಾಲು ಶಾಲೆಯಲ್ಲಿ ವಿಶ್ವ ಮಾನವ ದಿನ ಆಚರಣೆ

ಬೆಳ್ತಂಗಡಿ: ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ಡಿ.29 ರಂದು ‘ವಿಶ್ವ ಮಾನವ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಅವರು ಮಾತನಾಡಿ ವಿಶ್ವಮಾನವರಾಗುವತ್ತ ನಮ್ಮ ಪಯಣ ಸಾಗ ಬೇಕು ಎಂದರು. ವಿದ್ಯಾರ್ಥಿನಿ ಆಯಿಷತ್ ಸಂಶಿಯ ದಿನದ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಿಂದ ಕುವೆಂಪುರವರ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು‌.

ಶಿಕ್ಷಕ ಸುಮನ್ ಯು‌. ಎಸ್ ಕಾರ್ಯಕ್ರಮವನ್ನು ಸಂಘಟಿಸಿದರು. ವಿದ್ಯಾರ್ಥಿನಿ ಸೃಜನ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *