ಬಂಟ್ವಾಳ : ನಿಯಂತ್ರಣ ತಪ್ಪಿ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪ ನಡೆದಿದೆ.

ಮೃತಪಟ್ಟವರನ್ನು ಕುಕ್ಕಾಜೆ ನಿವಾಸಿ, ಇಮ್ರಾನ್( 40) ಎಂದು ಗುರುತಿಸಲಾಗಿದೆ.

ಮಂಗಳೂರು ಕಡೆಯಿಂದ ಬರುತ್ತಿದ್ದ ಪೊಲೀಸ್ ಯೋರ್ವರು ಚಲಾಯಿಸುತ್ತಿದ್ದ ನ್ಯಾನೋ ಕಾರು ನಿಯಂತ್ರಣ ತಪ್ಪಿ ಹೆಗ್ಗಡೆಬೆಟ್ಟು ಮನೆ ಬಳಿ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಇಮ್ರಾನ್ ಅವರು ಬೈಕ್ ನಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡದ್ದರು .

ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ.




