ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆ ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ನ 3ನೇ ವರ್ಷದ ಚಾಲಕರ ಸಮಾವೇಶವು ಜ.4 ರಂದು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಈ ಸಮಾವೇಶವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ಜಿಲ್ಲಾಧ್ಯಕ್ಷರು ರಾಜೇಶ್ ಬರೆ ಉದ್ಘಾಟಿಸಲಿದ್ದು, ಸಮಾವೇಶದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ಗೌರಾವಾಧ್ಯಕ್ಷರು ಸಾಜಿದ್ ಐ. ಜಿ ಸುಳ್ಯ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಸಭಾಧ್ಯಕ್ಷ ಜ. ಯು.ಟಿ ಖಾದರ್, ಮಂಗಳೂರಿನ ಸಂಸದರು ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಬಂಟ್ವಾಳದ ಮಾಜಿ ಶಾಸಕ ಬಿ. ರಮಾನಾಥ ರೈ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು , ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಿಥುನ್ ರೈ, ಹರಿಕೃಷ್ಣ ಬಂಟ್ವಾಳ ಸೇರಿದಂತೆ ಅನೇಕ ಗಣ್ಯರು ಘನ ಉಪಸ್ಥಿತಿವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಸಭಾ ಕಾರ್ಯಕ್ರಮದ ಜೊತೆಗೆ ಆಂಬುಲೆನ್ಸ್ ಲೋಕಾರ್ಪಣೆ, ಉಚಿತ ಆರೋಗ್ಯ ತಪಾಸಣೆ, ಹಾಗೂ ಚಾಲಕ ಮರ್ಹೂಮ್ ಇರ್ಷಾದ್ ತಲಪಾಡಿ ಇವರ ಸ್ಮರಣಾರ್ಥವಾಗಿ ರಕ್ತದಾನ ಶಿಬಿರ ನಡೆಯಲಿದೆ.

ಬಳಿಕ ಸಮಾಜಿಕ ಕಾರ್ಯಕರ್ತ ಈಶ್ವರ್ ಮಲ್ಪೆ, ಬೆಂಗಳೂರಿನ ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು ಜನಾಬ್ ಟಿ. ಎಂ. ಶಹೀದ್ ತೆಕ್ಕಿಲ್, ಜನಾಬ್ ಮೊಹಮ್ಮದ್ ಮೊಯ್ದೀನ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು ಇದರ ಜೊತೆಗೆ ಉತ್ತಮ ಶ್ರೇಣಿ ಪಡೆದ ವಿಜೇತ ವಿದ್ಯಾರ್ಥಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ, ಹಿರಿಯ ಚಾಕಲಕರಿಗೆ, ಸನ್ಮಾನ ಕಾರ್ಯಕ್ರಮ ನಡೆಯಲಿದೆ.




