ಮಂಗಳೂರು: ಕಾರಾಗೃಹಕ್ಕೆ ಅಧಿಕಾರಿ ಹಾಗೂ ಸಿಬ್ಬಂದಿಗಳು ದಿಢೀರ್ ತಪಾಸಣೆ ನಡೆಸಿ 2 ಮೊಬೈಲ್ ಫೋನ್ ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜರನ್ನು ಜಪ್ತಿ ಮಾಡಿ ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಇಲಾಖೆಯ ಮುಖ್ಯಸ್ಥರಾದ ಮಾನ್ಯ ಅಲೋಕ್ ಕುಮಾರ್ ಐ.ಪಿ.ಎಸ್. ಮಹಾನಿರ್ದೇಶಕರು ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆ ಬೆಂಗಳೂರು ಇವರಿಗೆ ದೂರವಾಣಿ ಮುಖಾಂತರ ವಿಷಯವನ್ನು ತಿಳಿಸಲಾಗಿದೆ ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕ ಶರಣ ಬಸಪ್ಪ ತಿಳಿಸಿದ್ದಾರೆ.
ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳನ್ನು ಬಳಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.




