ಬಾಯ್ಸ್ ಪಿಜಿಯೊಂದರಲ್ಲಿ ಸಿಲಿಂಡರ್‌ ಸ್ಫೋಟ: ಓರ್ವ ಸಾವು, ಮೂವರು ಗಂಭೀರ ಗಾಯ

ಬೆಂಗಳೂರು: ಕುಂದಲಹಳ್ಳಿಯಲ್ಲಿ ಸೆವೆನ್ ಹಿಲ್ಸ್ ಕೋ‌ಲಿವಿಂಗ್ ಬಾಯ್ಸ್ ಪಿಜಿಯೊಂದರಲ್ಲಿ ಸಿಲಿಂಡರ್‌ ಸ್ಫೋಟಗೊಂಡು ಓರ್ವ ಮೃತಪಟ್ಟಿದ್ದು ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಮೃತಪಟ್ಟವರನ್ನು ಬಳ್ಳಾರಿ ಮೂಲದ ಅರವಿಂದ್ ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡವರನ್ನು ವೆಂಕಟೇಶ್ (28), ವಿಶಾಲ್ (23), ಗೋಯಲ್ (25) ಎಂದು ಗುರುತಿಸಲಾಗಿದೆ.

ಪಿಜಿಯ ಕೆಳಮಹಡಿಯಲ್ಲಿ ಇರುವ ಅಡುಗೆ ಕೋಣೆಯಲ್ಲಿ ಅನಿಲ ಸೋರಿಕೆಯಾದ ಪರಿಣಾಮ ಸಿಲಿಂಡರ್‌ ಸ್ಫೋಟಗೊಂಡು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಪಿಜಿಯಲ್ಲಿದ್ದ ಇತರರನ್ನು ಬೇರೆ ಬೇರೆ ಪಿಜಿಗಳಿಗೆ ಶಿಫ್ಟ್ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *