Breaking
21 Mar 2026, Sat

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ ಧನ ಸಹಾಯ ಹಸ್ತಾಂತರ

ಬಂಟ್ವಾಳ: ವಯರಿಂಗ್ ಕೆಲಸ ಮಾಡುತ್ತಿದ್ದ ವೇಳೆ ಬಿದ್ದು ತಲೆ ಮತ್ತು ಕಾಲಿಗೆ ತೀವ್ರವಾದ ಪೆಟ್ಟಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ನೇಲ್ಯಪಲ್ಕೆ ನಿವಾಸಿ ಜಿತೇಂದ್ರರವರಿಗೆ ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ ಧನ ಸಹಾಯವನ್ನು ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು ಇಲ್ಲಿ ಪ್ರಧಾನ ಅರ್ಚಕರಾದ ಶ್ರೀ ಸುಧೀರ್ ಭಟ್ ಇವರ ಸಮ್ಮುಖದಲ್ಲಿ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಶಿವಪ್ಪ ಪೂಜಾರಿ ಹಟದಡ್ಕ, ಆನಂದ ಪೂಜಾರಿ ಅಲ್ಲಂಗಾರು ಮತ್ತು ಟ್ರಸ್ಟ್ ನ ಸೇವಾ ಮಾಣಿಕ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *