Breaking
6 May 2026, Wed

ಬಸ್‌ ಮತ್ತು ಬೈಕ್‌ ನಡುವೆ ಡಿಕ್ಕಿ: ತಂದೆ ಮಗ ಸಾವು, ಮಗಳು ಗಂಭೀರ

ಹುಬ್ಬಳ್ಳಿ: ಕಾರವಾರ ರಸ್ತೆಯ ಅಂಚಟಗೇರಿ ಬಳಿ ಬಸ್‌ ಮತ್ತು ಬೈಕ್‌ ನಡುವೆ ಡಿಕ್ಕಿ ಸಂಭವಿಸಿ ತಂದೆ ಹಾಗೂ ಮಗ ಮೃತಪಟ್ಟಿದ್ದು, ಮಗಳು ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ನಿವಾಸಿ, ಮೆಹಬೂಬ್‌ ಖಾನ್‌ ಉಸ್ತಾದಿ(36)ಮತ್ತು ಮಗ ಅಸ್ಸೇನ್‌(2)ಎಂದು ಗುರುತಿಸಲಾಗಿದ್ದು. ಗಂಭೀರವಾಗಿ ಗಾಯಗೊಂಡ ಮಗಳನ್ನು ಅಜೀಬಾ(4) ಎಂದು ಗುರುತಿಸಲಾಗಿದೆ.

ಹುಬ್ಬಳ್ಳಿಯಿಂದ ತಡಸಕ್ಕೆ ತೆರಳುತ್ತಿದ್ದ ಬೈಕ್ ಸವಾರ ಮೆಹಬೂಬ್‌ ಖಾನ್‌ ಅವರು ಓವರ್‌ಟೇಕ್‌ ಮಾಡಲು ಹೋಗಿ ಎದುರುನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಬಾಲಕಿಯನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *