Breaking
19 Sep 2026, Sat

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಪೊಲೀಸ್‌ ವಶಕ್ಕೆ

ಉಳ್ಳಾಲ : ಗಾಂಜಾ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ತಲಪಾಡಿ ರೈಲ್ವೇ ಹಳಿ ಬಳಿಯ ಕಲ್ಪನೆ ಎಂಬಲ್ಲಿ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ರಾಜ್ ಪಾಲ್ (32) ಉತ್ತರ ಪ್ರದೇಶ ಮೂಲದ ಹರ್ದೋಯಿ ಜಿಲ್ಲೆಯ ಜೂರಿ ಚಂದ್ರಾಪುರ್ ನಿವಾಸಿ ಎಂದು ತಿಳಿದುಬಂದಿದೆ.

ಉತ್ತರ ಪ್ರದೇಶದಿಂದ ಮಂಗಳೂರಿಗೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಆರೋಪಿಯಿಂದ 21,000 ರೂ. ಬೆಲೆಯ 425 ಗ್ರಾಂ ಗಾಂಜಾ, 650 ರೂ. ನಗದು, ಒಂದು ಮೊಬೈಲ್ ಫೋನ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *