Breaking
9 May 2026, Sat

ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ: ಬಾಲಕ ಸಾವು

ಹೊಸಂಗಡಿ: ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದು ಬಾಲಕ ಮೃತಪಟ್ಟಿರುವ ಘಟನೆ ಡಿ. 31 ರಂದು ನಡೆದಿದೆ.

ಮೃತಪಟ್ಟ ಬಾಲಕನನ್ನು ಹೊಸಂಗಡಿಯ ನಝೀರ್ ಎಂಬವರ ಪುತ್ರ ಝಾಹಿರ್ (13) ಎಂದು ಗುರುತಿಸಲಾಗಿದೆ. ಝಾಹಿರ್ ಅವರು ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಡಿ. 31 ರಂದು ಬಾಲಕ ಮದ್ಯಾಹ್ನ ಅಂಗಡಿಗೆಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *