Breaking
22 Mar 2026, Sun

ಪುತ್ತೂರಿನಲ್ಲಿ ದರೋಡೆ ಯತ್ನ: ಹೆಲ್ಮೆಟ್ ಧರಿಸಿ ಮನೆಗೆ ನುಗ್ಗಿದ್ದ ದಂಪತಿ ಬಂಧನ

ಪುತ್ತೂರು: ಹೆಲ್ಮೆಟ್ ಧರಿಸಿ ಮುಖ ಮುಚ್ಚಿಕೊಂಡು ಮನೆಯೊಂದಕ್ಕೆ ನುಗ್ಗಿ ದರೋಡೆಗೆ ಯತ್ನಿಸಿದ ದಂಪತಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಪ್ರಸ್ತುತ ಪಂಜದಲ್ಲಿ ಬಾಡಿಗೆ ವಾಸವಾಗಿರುವ ಕಾರ್ತಿಕ್ ರಾವ್ (31) ಹಾಗೂ ಆತನ ಪತ್ನಿ ಕೆ.ಎಸ್. ಸ್ವಾತಿ ರಾವ್ (25) ಎಂದು ಗುರುತಿಸಲಾಗಿದೆ.

ಡಿ. 17ರ ಮಧ್ಯರಾತ್ರಿ ಪುತ್ತೂರು ಕಸಬಾ ನಿವಾಸಿ, ನಿವೃತ್ತ ಪ್ರಾಂಶುಪಾಲರಾದ ಎ.ವಿ. ನಾರಾಯಣ (84) ಅವರ ಮನೆಗೆ ಇಬ್ಬರು ಅಪರಿಚಿತರು ಹೆಲ್ಮೆಟ್ ಧರಿಸಿ ಮುಖ ಮುಚ್ಚಿಕೊಂಡು ಮನೆಯ ಹಿಂಬಾಗಿಲಿನಿಂದ ಒಳನುಗ್ಗಿ, ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಲು ಯತ್ನಿಸಿದ್ದಾರೆ.

ಕಳ್ಳತನ ಮಾಡುವ ವೇಳೆ ನಡೆದ ತಳ್ಳಾಟದಲ್ಲಿ ನಾರಾಯಣ ಅವರ ಪತ್ನಿಗೆ ಗಾಯಗಳಾಗಿದ್ದು ನಾರಾಯಣ ಅವರು ಜೋರಾಗಿ ಕಿರುಚಿದ ಪರಿಣಾಮ ಗದ್ದಲ ಉಂಟಾಗಿದೆ. ಇದರಿಂದ ಭಯಗೊಂಡ ಆರೋಪಿಗಳು ಯಾವುದೇ ಸೊತ್ತುಗಳನ್ನು ಕಳ್ಳತನ ಮಾಡದೆ ಹಿಂಬಾಗಿಲಿನ ಮೂಲಕ ಪರಾರಿಯಾಗಿದ್ದಾರೆ.

ಈ ಕುರಿತು ನಾರಾಯಣ ಅವರ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿ, ಬಂಧಿತರಿಂದ ಅಪರಾಧಕ್ಕೆ ಬಳಸಲಾಗಿದ್ದ ಬೈಕ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *