Breaking
22 Mar 2026, Sun

ನಿದ್ದೆ ಮಂಪರಿನಲ್ಲಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್:‌ ಮಗು ಸಾವು, ಹಲವರಿಗೆ ಗಂಭೀರ ಗಾಯ

ಉಡುಪಿ: ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್ಸೊಂದು ಗುಡ್ಡಕ್ಕೆ ಡಿಕ್ಕಿ ಹೊಡೆದು ಮಗುವೊಂದು ಮೃತಪಟ್ಟು, ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಡಿ. 30ರ ತಡರಾತ್ರಿ ನಡೆದಿದೆ.

ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನಿಗೆ ನಿದ್ದೆ ಮಂಪರು ಆವರಿಸಿದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಶರೀಫಾಬಿ (57), ಇಮಾಮ್ ಸಾಬ್ (73) ಮತ್ತು ಸಫಾನ (28) ಸೇರಿದಂತೆ ಹಲವರು ಗಾಯಗೊಂಡಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗಳು ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *