Breaking
22 Mar 2026, Sun

ಓಡಿಲ್ನಾಳದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಕಟ್ಟಡ ಬೈಲ್ ಎಂಬಲ್ಲಿ ಜನವರಿ. 1 ರಂದು ನಡೆದಿದೆ.

ಮೃತರನ್ನು ಕಟ್ಟಡ ಬೈಲ್ ನಿವಾಸಿ ಮಂಜುನಾಥ ನಾಯಕ್ (42ವ) ಎಂದು ಗುರುತಿಸಲಾಗಿದೆ.

ಮಂಜುನಾಥ್ ಅವರು ತಮ್ಮ ಮನೆಯ ಕೊಠಡಿಯ ಒಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ತಂದೆ ಗೋಪಾಲ್ ನಾಯಕ್, ತಾಯಿ, ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *