ಬೆಳ್ತಂಗಡಿ : ಸ್ಕೂಟರ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಡಿ.31 ರಂದು ನಡೆದಿದೆ.
ಮೃತಪಟ್ಟವರನ್ನು ನೆರಿಯಾ ಗ್ರಾಮದ ಗಂಡಿಬಾಗಿಲು ನಿವಾಸಿ ಜಾನ್ ಪಿ.ಜೆ.(52) ಎಂದು ಗುರುತಿಸಲಾಗಿದೆ.

ಡಿ. 25ರಂದು ಅಂಬಟ್ಟಮಲೆ ಕಡೆಯಿಂದ ಅಣಿಯೂರು ಕಡೆಗೆ ತೆರಳುತ್ತಿದ್ದ ಸಂದರ್ಭ ಇಳಿಜಾರು ರಸ್ತೆಯಲ್ಲಿ ಸ್ಕೂಟರ್ ಸ್ಕಿಡ್ ಆಗಿ ಬಿದ್ದು ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ತಲೆಗೆ ತೀವ್ರವಾದ ಗಾಯಗೊಂಡ ಅವರನ್ನು ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.





