ಕಾಸರಗೋಡು : ಪೆಟ್ರೋಲ್ ಪಂಪ್ ಸಮೀಪ ಭಾರೀ ಅಗ್ನಿ ಅವಘಡ ಸಂಭವಿಸಿದ ಘಟನೆ ಬೇಳ ದರ್ಬೆತ್ತಡ್ಕದಲ್ಲಿ ನಡೆದಿದೆ.
ಹುಲ್ಲಿಗೆ ತಗುಲಿದ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದ್ದು, ಎಕರೆಗಟ್ಟಲೆ ಪೊದೆಗಳು ಹಾಗೂ ಮರಗಳು ಹೊತ್ತಿ ಉರಿದಿದೆ. ಬೆಂಕಿಯನ್ನು ನಂದಿಸಲು ಸ್ಥಳೀಯರು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗದ ಕಾರಣ ಬಳಿಕ ಅಗ್ನಿ ಶಾಮಕ ದಳದ ಸಿಬಂದಿಗಳಿಗೆ ಮಾಹಿತಿ ನೀಡಲಾಗಿದೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಭಾರೀ ದುರಂತವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸುಮಾರು 20 ಎಕರೆಯಷ್ಟು ಗುಡ್ಡ ಪ್ರದೇಶಕ್ಕೆ ಬೆಂಕಿ ಪಸರಿಸಿದ್ದು ಎರಡೂವರೆ ಗಂಟೆಗೂ ಅಧಿಕ ಸಮಯ ಬೆಂಕಿಯನ್ನು ಹತೋಟಿಗೆ ತರಲಾಗಿದೆ ಎಂದು ತಿಳಿದುಬಂದಿದೆ.




