Breaking
26 Sep 2026, Sat

ಆಟೋರಿಕ್ಷಾವೊಂದು ಕಾರಿಗೆ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಬೈಂದೂರು: ಉಪ್ಪುಂದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋರಿಕ್ಷಾವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಡಿ. 31 ನಡೆದಿದೆ.

ಆಟೋ ಚಾಲಕ ಶಾಲೆಬಾಗಿಲು ನಿಂದ ನಾಗೂರಿಗೆ ತೆರಳುತ್ತಿದ್ದು ಕಾರು ಭಟ್ಕಳದಿಂದ ಕುಂದಾಪುರ ಕಡೆಗೆ ಬರುತ್ತಿದ್ದ ವೇಳೆ ಉಪ್ಪುಂದ ಪೆಟ್ರೋಲ್ ಬಂಕ್ ಬಳಿ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರು ಭಾಗಶಃ ಹಾನಿಗೊಳಗಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *