ಸೇತುವೆಗೆ ಬೈಕ್ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಕಾಪು: ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದು ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಡಿ. 2) ನಸುಕಿನ ವೇಳೆ ನಡೆದಿದೆ.

ಸುಬ್ರಹ್ಮಣ್ಯದ ಯುವರಾಜ್ ಮೃತಪಟ್ಟ ದುರ್ದೈವಿ.

ಯುವರಾಜ್ ಅವರು ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಸವಾರ ಯುವರಾಜ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *