ಬಂಟ್ವಾಳ: ಸಜೀಪ ನಡುವಿನ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರಿಗೆ ರಂಗ ಪೂಜೆ ಹಾಗೂ ಅನ್ನದಾನ ಸೇವೆಯು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ. ಭಟ್, ಕೆ ರಾಧಾಕೃಷ್ಣ ಆಳ್ವ, ರಾಮ ಬರೆ, ಪ್ರವೀಣ್ ಶೆಟ್ಟಿ, ಸುಧಾಕರ ಕೇಟಿ, ಕಿಶನ್ ಸೇನವ, ವೆಂಕಟೇಶ, ಗಂಗಾಧರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




