ಕಾಸರಗೋಡು: ಲಾಟರಿ ಅಂಗಡಿ ಮತ್ತು ಝೆರಾಕ್ಸ್ ಅಂಗಡಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಕಾಸರಗೋಡುವಿನ ತಾಲೂಕು ಕಚೇರಿ ಬಳಿ ನಡೆದಿದೆ.

ಗುರುವಾರ ರಾತ್ರಿ 11.15 ರ ಸುಮಾರಿಗೆ ಬೆಂಕಿ ಹತ್ತಿಕೊಂಡಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಕಾಸರಗೋಡಿನಿಂದ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.
ಅಂಗಡಿಯ ಮಾಲೀಕರ ಹಾಗೂ ನಷ್ಟದ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.




