ಉಡುಪಿ : ಪರ್ಕಳ ಬಿ.ಎಂ ಸ್ಕೂಲ್ ಬಳಿ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಗೂಡ್ಸ್ ಟೆಂಪೋಗೆ ಬೈಕೊಂದು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಮಣಿಪಾಲದ ಕಡೆಗೆ ತೆರಳುತ್ತಿದ್ದ ಟೆಂಪೋ ಚಾಲಕ ಯೂಟರ್ನ್ ತೆಗೆದುಕೊಳ್ಳುವ ವೇಳೆ ಹಿರಿಯಡ್ಕ ಕಡೆಯಿಂದ ಅತೀ ವೇಗವಾಗಿ ಬಂದ ಬೈಕ್ ಟೆಂಪೋಗೆ ಡಿಕ್ಕಿ ಹೊಡೆದಿದೆ. ಅಪಾಘತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಟೆಂಪೋದ ಮುಂಭಾಗಕ್ಕೂ ಹಾನಿಯಾಗಿದೆ ಎಂದು ತಿಳಿದುಬಂದಿದೆ.




