Breaking
22 Mar 2026, Sun

ಗೂಡ್ಸ್ ಟೆಂಪೋವೊಂದು ರಿಕ್ಷಾಕ್ಕೆ ಡಿಕ್ಕಿ: ಮಹಿಳೆ ಗಂಭೀರ

ಸಿದ್ದಾಪುರ : ಅಲ್ಪಾಡಿ ಗ್ರಾಮದ ಕೊಳಲಾಡಿ ಬಳಿ ಆಟೋ ರಿಕ್ಷಾಕ್ಕೆ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದು ಇಬ್ಬರು ಗಾಯಗೊಂಡಿರುವ ಘಟನೆ ಡಿ. 30ರಂದು ನಡೆದಿದೆ.

ಸುಧಾಕರ ಶೆಟ್ಟಿ ಮತ್ತು ಲಕ್ಷ್ಮೀ ಅವರನ್ನು ಕರೆದುಕೊಂಡು ಆರ್ಡಿ ಕಡೆ ಹೋಗುವಾಗ ಟೆಂಪೋವೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಸುಧಾಕರ ಶೆಟ್ಟಿ ಅವರಿಗೆ ಸಣ್ಣಪುಟ್ಟಗಾಯಗಳಾಗಿದ್ದು, ಗಂಭೀರ ಗಾಯಗೊಂಡ ಲಕ್ಷ್ಮೀ ಅವರನ್ನು ಹೆಬ್ರಿ ಸರಕಾರಿ ಆಸ್ಪತ್ರೆ ಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *