ಉಪ್ಪಿನಂಗಡಿ: ಪೆರ್ನೆಯ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಉಪಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವ ನಾಪತ್ತೆಯಾಗಿರುವ ಘಟನೆ ಡಿ. 17 ನಡೆದಿದೆ.
ನಾಪತ್ತೆಯದವರನ್ನು ಸುಬ್ರಹ್ಮಣ್ಯಂ (30) ಎಂದು ಗುರುತಿಸಲಾಗಿದೆ.

ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ವಾಸ್ತವ್ಯ ಹೊಂದಿದ್ದ ಇವರು ಡಿ. 17 ರಂದು ತಮ್ಮನಿಗೆ ಹುಷಾರಿಲ್ಲ, ರೂಮಿಗೆ ಹೋಗುತ್ತೇನೆ ಎಂದು ಹೇಳಿ ಹೊರಟಿದ್ದರು. ಆದರೆ ಬಳಿಕ ಅವರು ಊರಿಗೆ ಹೋಗದೆ ಎಲ್ಲಿಯೂ ಕಾಣಿಸದೆ ನಾಪತ್ತೆಯಾಗಿದ್ದಾರೆ ಎಂದು ಅವರ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





