Breaking
21 Jun 2026, Sun

ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಪುತ್ತೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಜ. 1 ರಂದು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬಂಧಿತ ಆರೋಪಿಯನ್ನು ಪುತ್ತೂರು ಕಸಬಾ ಗ್ರಾಮದ ನಿವಾಸಿ ಮೊಹಮ್ಮದ್ ತೌಸೀಫ್ (36) ಎಂದು ಗುರುತಿಸಲಾಗಿದೆ.

ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡರು. ವಿಚಾರಣೆಯ ವೇಳೆ ನಿಷೇಧಿತ ಗಾಂಜಾ ಹೊಂದಿದ್ದನ್ನು ಆರೋಪಿಯೇ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿಯಿಂದ 400 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *