Breaking
21 Jun 2026, Sun

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು : ಬೈಕ್ ಮತ್ತುಆಟೋಗೆ ಡಿಕ್ಕಿ, ಇಬ್ಬರಿಗೆ ಗಾಯ

ಉಡುಪಿ: ಜಾಮಿಯಾ ಮಸೀದಿ ಸಮೀಪದ ಐರೋಡಿ ಬಿಲ್ಡಿಂಗ್ ಬಳಿ ಕಾರೊಂದನ್ನು ರಿವರ್ಸ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮತ್ತು ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದು ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

ಕಾರನ್ನು ರಿವರ್ಸ್‌ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಅತೀ ವೇಗವಾಗಿ ಹಿಮ್ಮುಖವಾಗಿ ಚಲಿಸಿ ಅಂಗಡಿಯತ್ತ ನುಗ್ಗಿದೆ. ಇದೇ ವೇಳೆ ಸಿಟಿ ಸೆಂಟರ್ ರಸ್ತೆಯಿಂದ ಸಂಸ್ಕೃತ ಕಾಲೇಜಿನತ್ತ ಸಾಗುತ್ತಿದ್ದ ಬೈಕ್ ಮತ್ತು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಮತ್ತು ಆಟೋ ಚಾಲಕ ಗಾಯಗೊಂಡಿದ್ದಾರೆ. ಈ ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *