Breaking
22 Mar 2026, Sun

ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ರಮ ಮರಳು ಅಡ್ಡೆಗೆ ಪೊಲೀಸರ ದಾಳಿ,17 ಬೋಟ್ ವಶಕ್ಕೆ

ಉಡುಪಿ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 17 ಬೋಟ್ ಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡ ಘಟನೆ ಉಡುಪಿಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇಲ್ಲಿನ ಹಾವಂಜೆ ಗ್ರಾಮದ ಮುಕ್ಕೇರಿ ಹಾಗೂ ಉಳ್ಳೂರು ಗ್ರಾಮದ ಅಮ್ಮುಂಜೆ ಪರಿಸರದಲ್ಲಿದ್ದ ನದಿಗಳಲ್ಲಿ ಬೋಟ್ ಗಳನ್ನು ಉಪಯೋಗಿಸಿಕೊಂಡು ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಈ ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಮರಳುಗಾರಿಕೆಗೆ ಉಪಯೋಗಿಸಿದ್ದ 17 ಬೋಟ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದ್ದು ಬ್ರಹ್ಮಾವರ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ಅಶೋಕ ಮಾಳಾಬಗಿ, ಸುದರ್ಶನ್ ದೊಡಮನಿ ಹಾಗೂ ಠಾಣಾ ಸಿಬ್ಬಂದಿ ಭಾಗವಹಿಸಿದ್ದಾರೆ.

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *