Breaking
22 Mar 2026, Sun

ಗಾಂಜಾ ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ಆರೋಪಿಗಳು ಬಂಧನ

ಮಂಗಳೂರು: ಗಾಂಜಾವನ್ನು ಮಾರಾಟ ಮಾಡಲು ಯತ್ನಿಸಿದ ಅಂತಾರಾಜ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಿಹಾರದ ಖಗರಿಯಾ ನಿವಾಸಿ ಸುನೀಲ್ ಕುಮಾರ್(40) ಮತ್ತು ಉತ್ತರಪ್ರದೇಶದ ಚುನಾರ್ ಮಿರ್ಝಾಪುರ್ ನಿವಾಸಿ ಬ್ರಿಜೇಶ್ ಶ್ರೀವಾಸ್ತವ್(42) ಎಂದು ಗುರುತಿಸಲಾಗಿದೆ.

ಬಿಹಾರ ರಾಜ್ಯದಲ್ಲಿ ಗಾಂಜಾವನ್ನು ಖರೀದಿಸಿ ರೈಲಿನಲ್ಲಿ ಮಂಗಳೂರಿಗೆ ತಂದು ಬಳಿಕ ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಜ. 3 ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ನ ರಸ್ತೆ ಬದಿಯಲ್ಲಿ ಸುಮಾರು 1 ಕೆ.ಜಿ ತೂಕದ ಮಾದಕವಸ್ತು ಗಾಂಜಾವನ್ನು ವಶದಲ್ಲಿರಿಸಿಕೊಂಡು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಖಚಿತ ಮಾಹಿತಿಯ ಮೇರೆಗೆ ಬಜಪೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಸುಮಾರು 1 ಕೆ.ಜಿ ಮಾದಕ ವಸ್ತು ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *