ಬೆಳ್ತಂಗಡಿ: ಬಂದಾರು ಗ್ರಾಮದ ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ಡಿ. 4 ರಂದು ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.
ಈ ವೇಳೆ ಬಂದಾರು ಕೆಲೆಂಜಿಮಾರು ನಾಗಶ್ರೀ ಗೆಳೆಯರ ಬಳಗದ ಅಧ್ಯಕ್ಷರಾದ ಪುಷ್ಪರಾಜ್ ಗೌಡ ಕೆಲೆಂಜಿಮಾರು, ಕಾರ್ಯದರ್ಶಿ ಲೋಕೇಶ್ ಬಿ. ಬಂದಾರು, ಬಂದಾರು ಪಂಚಾಯತ್ ಸದಸ್ಯರಾದ ಚೇತನ್ ಗೌಡ ಪಾಲ್ತಿಮಾರ್, ಹಾಗೂ ಪದಾಧಿಕಾರಿಗಳು, ಪ್ರಮುಖರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.






