Breaking
23 Mar 2026, Mon

ಸುಳ್ಯದಲ್ಲಿ ಮೂರು ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ತಾಯಿ ಸಾವು

ಸುಳ್ಯ: ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ತಾಯಿಯೊಬ್ಬಳು ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದಲ್ಲಿ ಜ.4 ರಂದು ನಡೆದಿದೆ.

ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮೂರು ವರ್ಷದ ಮಗು ಧನ್ವಿ ಮೃತಪಟ್ಟ ದುರ್ದೈವಿಗಳು.

ಶನಿವಾರ ರಾತ್ರಿ ಮನೆಯವರೊಂದಿಗೆ ಕೆಲಸ ಕಾರ್ಯಗಳನ್ನು ಮಾಡಿ ಮಲಗಿದ್ದ ಮಧುಶ್ರೀ ಅವರು ರವಿವಾರ ಬೆಳಗ್ಗೆ ಮಗು ಸಹಿತ ಕಾಣದೇ ಇದ್ದ ಸಂದರ್ಭದಲ್ಲಿ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮನೆ ಸಮೀಪದ ಕೆರೆಯಲ್ಲಿ ಮಧುಶ್ರೀ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ. ಮಧುಶ್ರೀ ಅವರು ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ.

ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದವರಾದ ಮಧುಶ್ರೀ ಅವರು ನಾಲ್ಕು ವರ್ಷದ ಹಿಂದೆ ಹರೀಶ್ ಅವರನ್ನು ವಿವಾಹ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ಳಾರೆ ಪೊಲೀಸ್ ಠಾಣಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *