Breaking
23 Mar 2026, Mon

ಕಾಪು ಪಾಂಗಾಳ ಬಳಿ ಖಾಸಗಿ ಬಸ್ ಹಾಗು ಸ್ಕೂಟರ್ ಅಪಘಾತ, ಸವಾರ ಸಾವು

ಉಡುಪಿ: ಖಾಸಗಿ ಬಸ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಉಡುಪಿಯ ಕಾಪು ಪಾಂಗಾಳ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜ.5 ರಂದು ನಡೆದಿದೆ.

ಮೃತ ವ್ಯಕ್ತಿಯನ್ನು ಪಡುಕೆರೆ ನಿವಾಸಿ ಕೃಷ್ಣ ಎಂದು ಗುರುತಿಸಲಾಗಿದೆ.

ಪಾಂಗಾಳ ಸಮೀಪ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಸ್ಕೂಟರ್ ನಲ್ಲಿ ಆಗಮಿಸುತ್ತಿದ್ದ ಕೃಷ್ಣ ಅವರ ಸ್ಕೂಟರ್ ಗೆ ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ಸು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಇದರ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸವಾರ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *