Breaking
21 Mar 2026, Sat

ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಮುಲ್ಕಿ: ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ‌ ನ್ಯಾಯಾಂಗ ಬಂಧನ‌ ವಿಧಿಸಿದೆ.

ಬಂಧಿತ ಆರೋಪಿಯನ್ನು ಮುಲ್ಕಿ ಕೊಲ್ನಾಡು ಕೆ.ಎಸ್. ರಾವ್‌ ನಗರ ನಿವಾಸಿ ಪ್ರಹ್ಲಾದ್ (19) ಎಂದು ಗುರುತಿಸಲಾಗಿದೆ.

ಆರೋಪಿಯು ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದು ಈತನ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ಬಂಧನಕ್ಕಾಗಿ ನ್ಯಾಯಾಲಯವು ಹಲವು ಬಾರಿ ದಸ್ತಗಿರಿಯ ವಾರೆಂಟ್‌ ಗಳನ್ನೂ ಹೊರಡಿಸಿದ್ದರೂ ಆರೋಪಿಯು ಎರಡು ವರ್ಷಗಳಿಂದ ಆರೋಪಿಯು ತಲೆ ಮರೆಸಿಕೊಂಡಿದ್ದನು. ಇದೀಗ ಮುಲ್ಕಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *