ಸುಳ್ಯ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟವರನ್ನು ಅರಂಬೂರಿನ ಸುಳ್ಯದ ಸಲ್ಮಾನ್ ಎಂದು ಗುರುತಿಸಲಾಗಿದೆ.

ಡಿ.5ರಂದು ಆಲೆಟ್ಟಿ ಗ್ರಾಮದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂಬೂರು ರಸ್ತೆಯಲ್ಲಿ ಬೈಕ್ ಚಲಾಯಿಸುತ್ತಿದ್ದ ವೇಳೆ ರಸ್ತೆ ಬದಿಯ ತಡೆಬೇಲಿಗೆ ಗುದ್ದಿ ಅವರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಪರಿಣಾಮ ತಲೆಗೆ ಗಂಭೀರ ಗಾಯವಾಗಿದ್ದು ತಕ್ಷಣವೇ ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.





