ಸರ್ಕಾರಿ ಬಸ್ ಮತ್ತು ಟಿಪ್ಪರ್ ನಡುವೆ ಅಪಘಾತ: ಹಲವರಿಗೆ ಗಂಭೀರ ಗಾಯ

ಕುಂದಾಪುರ: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂರು-ನೇರಳಕಟ್ಟೆ ಮಾರ್ಗದ ಶೆಟ್ರಕಟ್ಟೆ ತಿರುವಿನಲ್ಲಿ ಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಸರ್ಕಾರಿ ಬಸ್ ಕುಂದಾಪುರದಿಂದ ಆಜ್ರಿ-ಸಿದ್ದಾಪುರ ಕಡೆಗೆ ತೆರಳುತ್ತಿದ್ದ ವೇಳೆ ನೇರಳಕಟ್ಟೆಯಿಂದ ಮಣ್ಣು ತುಂಬಿಸಿಕೊಂಡು ತಲ್ಲೂರಿನತ್ತ ಸಾಗುತ್ತಿದ್ದ ಟಿಪ್ಪರ್ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನೆಯ ಸಮಯದಲ್ಲಿ ಬಸ್ ನಲ್ಲಿ ಬಹುತೇಕ ಕಾಲೇಜು ವಿದ್ಯಾರ್ಥಿಗಳಿದ್ದು, ಕಿಟಿಕಿ ಬದಿಯಲ್ಲಿ ಕುಳಿತ್ತಿದ್ದ ವಿಧ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *