Breaking
25 Sep 2026, Fri

ಸಜೀಪ ಮೂಡದ ಈಶ್ವರ ಮಂಗಳ ಶ್ರೀ ಸದಾಶಿವ ದೇವಸ್ಥಾನದಲ್ಲಿ ರಂಗಪೂಜೆ

ಬಂಟ್ವಾಳ: ಸಜೀಪ ಮೂಡದ ಈಶ್ವರ ಮಂಗಳ ಶ್ರೀ ಸದಾಶಿವ ದೇವಸ್ಥಾನದಲ್ಲಿ ಶ್ರೀ ದೇವರಿಗೆ ರಂಗ ಪೂಜಾ ಸೇವೆಯನ್ನು ಹಾಗೂ ಅನ್ನದಾನವನ್ನು ಅಯ್ಯಪ್ಪ ಭಕ್ತ ವೃಂದ ವತಿಯಿಂದ ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು.

ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಅರ್ಚಕ ನಾಗರಾಜ್ ಭಟ್ , ಶ್ರೀನಿವಾಸ ಶಿವ ತಾಯ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗಿರೀಶ್ ಕುಮಾರ್ ಪೆರ್ವ, ಸಜೀಪಮೂಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿಶ್ವನಾಥ ಬೆಳ್ಚಡ, ಗುರುಸ್ವಾಮಿ ಪದ್ಮನಾಭ ಪೂಜಾರಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *