ಬಂಟ್ವಾಳ: ಸಜೀಪ ಮೂಡದ ಅನ್ನಪಾಡಿಯ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಟಿ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಬಾಲ ಗಣಪತಿ ಹೋಮ ಶ್ರೀ ದೇವರಿಗೆ ವಿಶೇಷ ಪೂಜೆಯು ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರುಗಿತು.

ಈ ಧಾರ್ಮಿಕ ವಿಧಿವಿಧಾನದಲ್ಲಿ ಊರವರು ಹಾಗೂ ಕುಟುಂಬದವರು ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಿ ಪ್ರಸಾದವನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಅರ್ಚಕ ಶ್ರೀನಿವಾಸ ಶಿವ ತಾಯ, ನಾಗರಾಜ ಭಟ್ ಸೇರಿದಂತೆ ಅನೇಕ ಭಕ್ತರು ಉಪಸ್ಥಿತರಿದ್ದರು.





