Breaking
21 Mar 2026, Sat

ಫೇಸ್ ಬುಕ್ ನಲ್ಲಿ ಜಿಲ್ಲಾ ಮುಸ್ಲಿಂ ಸ್ನೇಹ ಸಮಿತಿಯ ಬಗ್ಗೆ ಕುರಿತು ಆಕ್ಷೇಪಾರ್ಹ ಬರಹ ಬರೆದ ಆರೋಪ, ವ್ಯಕ್ತಿ ಅರೆಸ್ಟ್

ಉಡುಪಿ: ಫೇಸ್ ಬುಕ್ ನಲ್ಲಿ ಉಡುಪಿ ಪರ್ಯಾಯ ಉತ್ಸವಕ್ಕೆ ಜಿಲ್ಲಾ ಮುಸ್ಲಿಂ ಸ್ನೇಹ ಸಮಿತಿಯು ನೀಡಿಲಿರುವ ಸಹಕಾರದ ಕುರಿತು ಧರ್ಮ – ಆಕ್ಷೇಪಾರ್ಹ ಬರಹ ಬರೆದಾತನ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಸುಧಾಕರ (37 ) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಈತ “ Sudeep Appu Nitte “ ಎಂಬ ಫೇಸ್ ಬುಕ್ ಖಾತೆಯಲ್ಲಿ ” ಹಿಂದೂ ಮುಸ್ಲಿಂ ಸೌಹಾರ್ದತೆಯಿಂದ ಇರಬೇಕಾದರೆ ಈ ಸೌಹಾರ್ದ ಸಮಿತಿಯವರಿಗೆ ಎಷ್ಟೋ ಕಾರ್ಯಗಳಿವೆ. ಅದನ್ನ ಬಿಟ್ಟು ಹಿಂದುಗಳ ಪರ್ಯಾಯ ಮೆರವಣಿಗೆಯಲ್ಲಿ “ಧಫ್ ದುಫ್ ಡಮ್ “ಅಂತ ಕಾರ್ಯಕ್ರಮ ಮಾಡುವ ಅಗತ್ಯವಿಲ್ಲ. ಪರ್ಯಾಯದಲ್ಲಿ ಶರಬತ್, ನೀರಿನ ಬಾಟಲಿ ಹಂಚಿದ ಕೂಡಲೇ ಸೌಹಾರ್ದ ಬೆಳೆಯಲ್ಲ, ಇದರಿಂದ ಹಿಂದುಗಳಿಗೆ ನಂಬಿಕೆ ಏನು ನಿಮ್ಮ ಮೇಲೆ ಹೆಚ್ಚಲ್ಲ . ಬಾಕಿದ್ದನ್ನು ಹೇಳಬೇಕಾದವರು ಹೇಳಿದ್ದಾರೆ” ಎಂದು ಬರೆಯಲಾಗಿತ್ತು ಎಂದು ಆರೋಪಿಸಲಾಗಿದೆ.

ಇದು ಧರ್ಮ -ಧರ್ಮ, ಜನಾಂಗಗಳ ಮಧ್ಯೆ ದ್ವೇಷವನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ತೊಂದರೆ ಮಾಡುವ ಪೊಸ್ಟ್ ಎಂಬ ಕಾರಣಕ್ಕೆ ಸುಧಾಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಸದ್ಯ ಆರೋಪಿತ ಸುಧಾಕರನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.

Leave a Reply

Your email address will not be published. Required fields are marked *